ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ ಎಂದು ವಿಶ್ಲೇಷಿಸಿದರು.
ಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು ಎಂದರು.