ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿಕೆಶಿ ವ್ಯಂಗ್ಯ

ಬೆಂಗಳೂರ: “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್  ಹತಾಶೆಯ ಅಂತಿಮ ಸ್ಥಿತಿ ತಲುಪಿದೆ ಎಂದು ಕುಹಕವಾಡಿದ್ದಾರೆ.

ಜಗದೀಶ್ ಶೆಟ್ಟರ್‌ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ ಎಲ್ಲದರಲ್ಲೂ ಅನುಮಾನಪಡಲು ಆಗಲ್ಲ. ಜಗದೀಶ್ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ. ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ ಎನ್ನುವ ಬಗ್ಗೆ ಗಮನ ಸೆಳೆದಾಗ, “ನನಗೆ ಎಲ್ಲಾ ಗೊತ್ತಿದೆ ನನಗೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಸಿಎಂಗೆ ಮಾಹಿತಿ ನೀಡುತ್ತಿದ್ದಾರೆ. ಬಿಜೆಪಿಯವರು ಏನು ಆಫರ್ ಕೊಡುತ್ತಿದ್ದಾರೆ ಅನ್ನೋದನ್ನೂ ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಹೇಳಿಸುತ್ತೇನೆ” ಎಂದು ಹೇಳಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement