ಬೆಂಗಳೂರು : ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಪಿ.ನಂಜುಂಡಿ ಇಂದು(ಎ.24) ಡಿ.ಕೆ.ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕೆ.ಪಿ.ನಂಜುಂಡಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಬರಮಾಡಿಕೊಂಡರು. ನಿನ್ನೆ ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ್ದ ಕೆ.ಪಿ ನಂಜುಂಡಿ ಅವರು ಬಿಜೆಪಿ ವಿರುದ್ದ ಅಸಮಾಧಾನ ಹೊರಹಾಕಿದ್ದರು.
