ಪಾಟ್ನಾ : ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ಪಕ್ಕದಲ್ಲಿರುವ ಟ್ವಿನ್ ಟವರ್ ಸೊಸೈಟಿಯಲ್ಲಿ ವಾಸಿಸುತ್ತಿದ್ದ ಗೋಪಾಲ್ ಖೇಮ್ಕಾ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಗುಂಡು ಹಾರಿಸಿ ತಕ್ಷಣ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಡು ಮತ್ತು ಶೆಲ್ ಕವಚವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಕೇಂದ್ರ ಎಸ್ಪಿ ದೀಕ್ಷಾ, ಜುಲೈ 4 ರ , ರಾತ್ರಿ 11 ಗಂಟೆ ಸುಮಾರಿಗೆ, ಗಾಂಧಿ ಮೈದಾನ ದಕ್ಷಿಣ ಪ್ರದೇಶದಲ್ಲಿ ಈ ಗುಂಡಿನ ದಾಳಿ ನಡೆಸಲಾಗಿದೆ. ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಟಾರ್ಗೆಟ್ ಮಾಡಿ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ತನಿಖೆ ಆರಂಭಿಸಲಾಗಿದೆ.