ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಒಕ್ಕಲಿಗ ಕೋಟಾವೇ ಮಾನದಂಡ ಎನ್ನಲಾಗಿದೆ.
ಪ್ರಸ್ತುತ ಈ ಹುದ್ದೆಯಲ್ಲಿರುವ ನಳಿನ್ ಕುಮಾರ್ ಅವರ ಅಧಿಕಾರಾವಧಿ ಮುಗಿದು ತಿಂಗಳುಗಳೇ ಕಳೆದು ಹೋಗಿವೆ. ಹೀಗಾಗಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯ ನಡುವೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುನ್ನೆಲೆಯಲ್ಲಿರುವುದು ಅಚ್ಚರಿಗೆ ಕಾರಣವಾಗಿದೆ.
ಇನ್ನೆರಡು ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂಬ ನಿರೀಕ್ಷೆಯನ್ನು ರಾಜ್ಯ ಬಿಜೆಪಿ ನಾಯಕರು ರಾಜ್ಯ ನಾಯಕರು ಹೊಂದಿದ್ದಾರೆ. ಇನ್ನು ನೇರವಾಗಿ ದೆಹಲಿಯಿಂದಲೇ ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಲಿದೆ.
ನೂತನ ಅಧ್ಯಕ್ಷರ ನೇಮಕ ಆಗದೇ ಇರೋ ಕಾರಣ ಪಕ್ಷದ ಸಂಘಟನೆಯೂ ಬಹುತೇಕ ನಿಷ್ಕ್ರೀಯವಾಗಿದೆ. ಅಲ್ಲದೇ ಕೆಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ . ಇದೆಲ್ಲದರಿಂದಲೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಹೀಗಾಗಿ ಅದಷ್ಟು ಶೀಘ್ರ ನೂತನ ಅಧ್ಯಕ್ಷರ ನೇಮಕವಾಗಲಿದೆ ಎನ್ನಲಾಗಿದೆ.