ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಸಿರಾಟ ಸಮಸ್ಯೆ ಸೇರಿದಂತೆ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ನಸುಕಿನ ಜಾವ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.