ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳ ತನಿಖೆಗೆ ಗೃಹ ಸಚಿವ ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿರುವ ಸಿಎಂ ಸಿದ್ದರಾಮಯ್ಯ. ಮುಡಾ ಪ್ರಕರಣದಲ್ಲಿ ಸಿಎಂ ಸಿಲುಕಿಸಿರುವ ವಿಪಕ್ಷಗಳ ತಂತ್ರಕ್ಕೆ ಪ್ರತಿಂತ್ರವಾಗಿ ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ.
ಸರ್ಕಾರ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ 26 ಕ್ಕೂ ಹೆಚ್ಚು ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಗೃಹ ಸಚಿವ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ೫ ಸಚಿವರನ್ನ ಸಮಿತಿಯನ್ನ ರಚಿಸಲಾಗಿದೆ. ಸಮಿತಿಯಲ್ಲಿ ಸಚಿವರಾದ ಹೆಚ್ ಕೆ ಪಾಟೀಲ್, ಸಂತೋಷ್ ಲಾಡ್ ,ಕೃಷ್ಣ ಬೈರೇಗೌಡ ಮತ್ತು ಪ್ರೀಯಾಂಕ್ ಖರ್ಗೆ ಇರಲಿದ್ದಾರೆ. ಈ ಸಮಿತಿಯು ಮುಂದಿನ ಎರಡು ತಿಂಗಳೊಳಗೆ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿ ಸಿಎಂ ಆದೇಶ ಹೊರಡಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.