ನವದೆಹಲಿ : ಬಿಜೆಪಿಯು ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಧರ್ಮಶಾಲಾ ಕುರುಕ್ಷೇತ್ರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ಎರಡರಲ್ಲೂ ಕಾಂಗ್ರೆಸ್ ಗೆಲುವನ್ನು ಮುನ್ಸೂಚಿಸಿತ್ತು. ಆದ್ರೆ ಫಲಿತಾಂಶ ಎಕ್ಸಿಟ್ ಪೋಲ್ ಮೀರಿಸಿ ಬರುತ್ತದೆ ಎನ್ನುವ ನಮ್ಮ ನಿರೀಕ್ಷೆ ಸುಳ್ಳಾಗಿಲ್ಲ, ಬಿಜೆಪಿ 3ನೇ ಬಾರಿಗೆ ಅಧಿಕಾರ ಹಿಡಿಯುವುದು ಖಚಿತವಾಗಿದೆ ಎಂದು ಹೇಳಿದರು.
ನಾವು ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸ್ಥಾಪಿಸಿದ ರೀತಿಯ ವ್ಯವಸ್ಥೆಯು ಹರಿಯಾಣಕ್ಕೆ ದೀರ್ಘಕಾಲದವರೆಗೆ ಪ್ರಯೋಜನ ತರುತ್ತದೆ. ಈ ಒಳ್ಳೆಯ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಹರಿಯಾಣದಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಬಿಜೆಪಿಯು ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ.