ಹಾಸ್ಟೆಲ್ ನ ನೀರಿನ ತೊಟ್ಟಿ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿಡದಿಯ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಬಿಡದಿ: ಹಾಸ್ಟೆಲ್ ನ ನೀರಿನ ತೊಟ್ಟಿ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಿಡದಿಯ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಗೊಲ್ಲಹಳ್ಳಿ ಗ್ರಾಮದಲ್ಲಿರು ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ಹೊರಗೆ ನೀರಿನ ಸಿಮೆಂಟ್ ತೊಟ್ಟಿ ನಿರ್ಮಾಣ ಮಾಡಲಾಗಿತ್ತು.
ಈ ತೊಟ್ಟಿಗೆ ನಲ್ಲಿಗಳನ್ನ ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಿಗ್ಗೆ ಮುಖ ತೊಳೆದುಕೊಳ್ಳಲು ಇದೆ ತೊಟ್ಟಿಯ ಬಳಿ ಹೋಗಿದ್ದಾರೆ.
30-40 ವಿದ್ಯಾರ್ಥಿಗಳು ಜೊತೆಯಲ್ಲಿ ಹೋಗಿ ಮುಖ ತೊಳೆದುಕೊಂಡು ಬಂದಿದ್ದಾರೆ.
ಗೋಡೆ ಕೌಶಿಕ್ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಮತ್ತೋರ್ವನ ಕಾಲಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.