ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಕಾವೇರಿ ನೀರಿಗಾಗಿ ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ವಿನೂತನ ಪ್ರತಿಭಟನೆ ಮಾಡುತ್ತಿರುವ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ಗೆ ಸರ್ಕಾರದಿಂದ ವಿರೋಧ ಇದ್ದು, ಪೊಲೀಸರಿಗೆ ಒತ್ತಡ ಹಾಕಿದೆ. ಬೆಂಗಳೂರಿನಲ್ಲೇ 50 ಸಾವಿರ ಪೊಲೀಸರನ್ನು ನಿಯೋಜಿಸಿದೆ. ಇಡೀ ಕರ್ನಾಟಕಕ್ಕೆ ಲಕ್ಷಾಂತರ ಪೊಲೀಸ್ ಹಾಕಿ ಸರ್ಕಾರವೇ ಬಂದ್ ಮಾಡುತ್ತಿದೆ. ನಾವು ಕಾವೇರಿ ಹೋರಾಟಕ್ಕೆ ಬಂದ್ ಮಾಡಿದ್ರೆ, ಸರ್ಕಾರ ಪೊಲೀಸ್ ಹಾಕಿ ಬಂದ್ ಮಾಡ್ತಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರ ಏನೇ ಮಾಡಿದರು ನಮ್ಮ ಕರೆಗೆ ರಾಜ್ಯವೇ ಸ್ಪಂದಿಸಿದ್ದು, ಬಂದ್ ಯಶಸ್ವಿಯಾಗಿದೆ. ಆದರೆ, ಸರ್ಕಾರ ಅರ್ಥ ಮಾಡಿಕೊಳ್ಳದೇ ಹೋರಾಟಗಾರರನು ಎಲ್ಲೆಂದರಲ್ಲಿ ಬಂಧನ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.