ಬೆಂಗಳೂರು : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಬೆಂಗಳೂರಿಗೆ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
ವಿಶೇಷ ವಿಮಾನದ ಮೂಲಕ ಆಗಮಿಸಿದ ಅವರಿಗೆ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಿದರು. ಈ ಸಂದರ್ಭ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ. ಎನ್. ಶಿವಶಂಕರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಮತ್ತಿತರ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಲ್ಡೀವ್ಸ್‌ನ ಮಂತ್ರಿಗಳ ಆಕ್ಷೇಪಾರ್ಹ ಹೇಳಿಕೆಗಳು ದ್ವಿಪಕ್ಷೀಯ ಸಂಬಂಧವನ್ನು ಹದಗೆಡಿಸಿತ್ತು. ಈ ಕಾರಣದಿಂದ ತನ್ನ ದೇಶದ ಸಂಬಂಧವನ್ನು ಮರುಹೊಂದಿಸಲು ಭಾರತಕ್ಕೆ ಭೇಟಿ ನೀಡಿದ್ದಾರೆ.
ಮಂಗಳವಾರ ತಾಜ್ ಮಹಲ್‌ಗೆ ಮೊಹಮ್ಮದ್ ಮುಯಿಜ್ಜು ಹಾಗೂ ಸಾಜಿದಾ ಮೊಹಮದ್ ಭೇಟಿ ನೀಡಿದ್ದು, 17ನೇ ಶತಮಾನದ ಸ್ಮಾರಕದ ವಾಸ್ತುಶಿಲ್ಪದ ಅದ್ಭುತವನ್ನು ಇಬ್ಬರೂ ವರ್ಣಿಸಿದ್ದಾರೆ. ಪ್ರೀತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಗೆ ಇದು ಸಾಕ್ಷಿಯಾಗಿದೆ ಎಂದು ಕೊಂಡಾಡಿದ್ದಾರೆ.