ಬೆಂಗಳೂರು: ಮೇ 12 ನೇ ತಾರೀಖಿನ ವರೆಗೂ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ 40-50 ಕೀಮಿ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
12 ನೇ ತಾರಿಖಿನ ಬಳಿಕ ಬೆಂಗಳೂರಿಗೆ ಹೆಚ್ಚಿನ ಮಳೆ ಸಾಧ್ಯತೆ ಜೊತೆಗೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ನಗರದಾದ್ಯಂತ ವಾಹನ ಸಂಚಾರಕ್ಕೆ ಅಡ್ಡಿಯಾಗುವುದನ್ನು ತಪ್ಪಿಸಲು ಸಂಚಾರ ಪೊಲೀಸರು ಹಲವು ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.