ಬೆಂಗಳೂರಿನಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಬೇಕಂದರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ನಿಂತು ಪರದಾಡಬೇಕು.
ಅದರಲ್ಲೂ ತುರ್ತು ಕೆಲಸವಿದ್ದಾಗ ವೇಗವಾಗಿ ಹೋಗಲು ಆಗುವುದಿಲ್ಲ. ಅಷ್ಟರಮಟ್ಟಿಗೆ ಟ್ರಾಫಿಕ್ ಸಮಸ್ಯೆ ಇದೆ.
ಇದೀಗ ದೇಶದಲ್ಲಿ 2026ರ ವೇಳೆಗೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆ ಆರಂಭಿಸಲು ಇಂಡಿಗೊ ಕಂಪನಿಯ ಮಾತೃಸಂಸ್ಥೆಯಾದ ಇಂಟರ್‌ಗ್ಲೋಬಲ್ ಎಂಟರ್ ಪ್ರೈಸಸ್ ಮತ್ತು ಅಮೆರಿಕದ ಆರ್ಚರ್ ಏವಿಯೇಷನ್ ಜಂಟಿಯಾಗಿ ಸಿದ್ಧತೆ ನಡೆಸಿವೆ.
ಪ್ರಥಮ ಬಾರಿಗೆ ನವದೆಹಲಿಯ ಕನೌಟ್‌ನಿಂದ ಹರಿಯಾಣದ ಗುರುಗ್ರಾಮಕ್ಕೆ ಈ ಸೇವೆ ಆರಂಭವಾಗಲಿದೆ.