ಬೆಂಗಳೂರು : ನಗರದಲ್ಲಿ ಬೆಳಗ್ಗೆಯೇ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಉದ್ಯಮಿಗಳ ಮನೆ , ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಗಡಿ ರಸ್ತೆ ಬಳಿ ಇರುವ ಇಟಿಎ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿರುವ ಪುನೀತ್ ಬೋರಾ ಮನೆ ಮೇಲೆ ದಾಳಿ ನಡೆಸಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
ಇನ್ನು ಆಡುಗೋಡಿ ಬಳಿಯ ಆಕ್ರೋಪೊಲಿಸ್ ಅಪಾರ್ಟ್ಮೆಂಟ್ಗೆ ಸಹ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಿಕ್ಕಿ ಘೋಷ್ ಎಂಬವರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿಯಾಗಿರುವ ರಿಕ್ಕಿ ಘೋಷ್ ನೆಲೆಸಿರುವ ಅಪಾರ್ಟ್ಮೆಂಟ್ನಲ್ಲಿ ದಾಖಲೆ ಪರಿಶೀಲನೆ ನಡೆಸಲಾಯಿತು