ಬೆಂಗಳೂರು: ಬೆಂಗಳೂರಿನ ಪೈಪ್ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕಳೆದ ಐದು ವರ್ಷಗಳಿಂದ ಗುಡಿಕೈಗಾರಿಕೆ ರೀತಿ ಮನೆಯಲ್ಲೇ ಅಗರಬತ್ತಿ ಕಾರ್ಖಾನೆ ನಡೆಲಾಗುತ್ತಿದ್ದು, ಗ್ರೌಂಡ್ ಫ್ಲೋರ್ನಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿದ್ದ ರಾಸಾಯನಿಕಗಳನ್ನು ಶೇಕರಿಸಿಡಲಾಗಿತ್ತು.
ಇನ್ನು ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳಿದ್ದ ಬಾಕ್ಸ್ಗಳು ಬ್ಲಾಸ್ಟ್ ಆಗಿ ರಾಸಾಯನಿಗಳು ರಸ್ತೆಗೆ ಹರಿದ ಪರಿಣಾಮ ರಸ್ತೆಗೂ ಬೆಂಕಿ ಆವರಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಎಂಟು ಬೈಕ್ಗಳು ಸುಟ್ಟು ಭಸ್ಮವಾಗಿವೆ.
ವಿಜಯನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.