ಬೆಂಗಳೂರಿನ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ – ನ.1ರಿಂದ ಜಾರಿ ಸಾಧ್ಯತೆ

ಬೆಂಗಳೂರು : ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಸೋಮವಾರ ಮನವಿಯೊಂದನ್ನು ಸಲ್ಲಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ (MoCA) ಪತ್ರ ಬರೆದು ಮನವಿ ಮಾಡಲು ಮುಂದಾಗಿದ್ದಾರೆ. ಜೋಶಿ ಅವರು ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮರಾರ್ ಅವರನ್ನು ಭೇಟಿ ಮಾಡಿ ವಿಮಾನ ನಿಲ್ದಾಣದಲ್ಲಿ ಕನ್ನಡವನ್ನು ಉತ್ತೇಜಿಸುವ ಹಾಗೂ ವಿಮಾನ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಸಮಯದಲ್ಲಿ ಕನ್ನಡವನ್ನು ಬಳಸುವ ಬಗ್ಗೆ ಚರ್ಚಿಸಿದರು. ಬಳಿಕ ಮಾತನಾಡಿದ ಜೋಶಿ, ನವೆಂಬರ್ 1 ವಿಮಾನಗಳಲ್ಲಿ ಕನ್ನಡದಲ್ಲೇ ಅನೌನ್ಸ್ಮೆಂಟ್ ಮಾಡುವುದನ್ನು ಪ್ರಾರಂಭಿಸಲು ನಾನು ಅವರನ್ನು ಕೇಳಿದ್ದೇನೆ. ಏಕೆಂದರೆ ಈ ವ್ಯವಸ್ಥೆಯನ್ನು ವಿಮಾನಗಳಲ್ಲಿ ಅಳವಡಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ವಿಮಾನಗಳಲ್ಲಿ ಮೊದಲ ಪ್ರಕಟಣೆಯು ಕನ್ನಡದಲ್ಲಿರಬೇಕು, ನಂತರ ಇತರ ಭಾಷೆಗಳನ್ನು ಅನುಸರಿಸಬೇಕು. ಬ್ರಿಟಿಷ್ ಏರ್ವೇಸ್ ಮತ್ತು ಸಿಂಗಾಪುರ್ ಏರ್ಲೈನ್ಸ್ ಈಗಾಗಲೇ ಇದನ್ನು ಕಾರ್ಯಗತಗೊಳಿಸಲು ಪ್ರಾರಂಭಿಸಿವೆ ಎಂದು ತಿಳಿಸಿದರು. MoCA ಯಿಂದ ಒಪ್ಪಿಗೆ ಬೇಕೆಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ. ಹೀಗಾಗಿ ನಾನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಕ್ಷಣ ಪತ್ರ ಬರೆಯುತ್ತೇನೆ ಎಂದು ಅವರು ಹೇಳಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement