ಬೆಂಗಳೂರು: ಈ ಹಿಂದೆ BMRCL ಸಂಸ್ಥೆಗೆ ತೆರಿಗೆ ವಿನಾಯಿತಿ ನೀಡಿದಂತೆ ಬಿಎಂಟಿಸಿಗೂ ಕೂಡ ತೆರಿಗೆ ವಿನಾಯಿತಿ ನೀಡಿ ಎಂದು ಸಾರಿಗೆ ಇಲಾಖೆ ಬಿಬಿಎಂಪಿಗೆ ಪತ್ರ ಬರೆದಿದೆ. ಒಂದು ವೇಳೆ ತೆರಿಗೆ ವಿನಾಯಿತಿ ನೀಡಿದರೆ ಪಾಲಿಕೆಗೆ ಒಂದು ಸಾವಿರ ಕೋಟಿ ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮನವಿಯನ್ನು ಬಿಬಿಎಂಪಿ ನಿರಾಕರಿಸಿದೆ. ಪ್ರಸುತ್ತ ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಅದರಲ್ಲೂ ಬಿಎಂಟಿಸಿಗೆ ಬಹುದೊಡ್ಡ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದು, ಸಾರಿಗೆ ಇಲಾಖೆ ಮನವಿಯನ್ನು ಪಾಲಿಕೆ ತಿರಸ್ಕರಿಸಿದೆ. ಸಾರಿಗೆ ಇಲಾಖೆ ನಷ್ಟಕ್ಕೆ ನಮ್ಮ ತೆರಿಗೆಗೂ ಯಾವುದೇ ಸಂಬಂಧ ಇಲ್ಲ. ಬಿಬಿಎಂಪಿ ಕಾಯ್ದೆ ಪ್ರಕಾರ ವಾಣಿಜ್ಯ ಹಾಗೂ ವಸತಿ ಬಳಕೆಗೆ ವಿನಾಯಿತಿ ಕೂಡುವ ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬಾಕಿ ಇರೋ ತೆರಿಗೆ ಪಾವತಿ ಮಾಡುವಂತೆ ಸೂಚನೆ ನೀಡಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.