ಕಾವೇರಿ ವಿವಾದದ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಸೆ.26 (ಮಂಗಳವಾರ) ಬೆಂಗಳೂರಿನಲ್ಲಿ ಬಂದ್ ಘೋಷಿಸಿದ್ದು, ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು: ಕಾವೇರಿ ವಿವಾದದ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳು ಸೆ.26 (ಮಂಗಳವಾರ) ಬೆಂಗಳೂರಿನಲ್ಲಿ ಬಂದ್ ಘೋಷಿಸಿದ್ದು, ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು, ವಿವಿಧ ಸಂಘಟನೆಗಳಿ ಬಂದ್ ಘೋಷಣೆ ಮಾಡಿವೆ.
ಜತೆಗೆ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಗರದಲ್ಲಿ ನಿಷೇಧಾಜ್ಞೆ ಜಾರಿ
ಬಂದ್ ಹಿನ್ನೆಲೆ ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದ ಮಂಗಳವಾರ ಮಧ್ಯರಾತ್ರಿ 12 ಗಂಟೆಯವರೆಗೂ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಗರದಾದ್ಯಂತ 144 ಸೆಕ್ಷನ್ ನಿಯಮ ಜಾರಿಯಲ್ಲಿರುತ್ತದೆ. ಒಂದು ಪ್ರದೇಶದಲ್ಲಿ 4 ಅಥವಾ ಅದಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.