ಬೆಂಗಳೂರು: ಮಳೆ ಇಲ್ಲದಾಗ ಮಳೆ ಹಾನಿಯಾದಾಗ ರಾಜ್ಯದಲ್ಲಿ ಜನ ಪರ ನಿಂತ ಬಗ್ಗೆ ಸಿಎಂ ರಾಜ್ಯ ಸರ್ಕಾರದ ಕಾರ್ಯ ವೈಖರಿ ತಿಳಿಸಿದ್ರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ. ಕಳೆದ ವರ್ಷ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೆ, ಈ ಬಾರಿ ಅತಿವೃಷ್ಟಿಗೆ ಒಳಗಾಗಿದೆ.
ಕೇಂದ್ರ ಸರ್ಕಾರ ಬರ ಪರಿಹಾರ ಮೊತ್ತವನ್ನು ತಡವಾಗಿ ನೀಡಿದರೂ ಸಹ ರಾಜ್ಯದಲ್ಲಿ ಬರದಿಂದ ಜನರಿಗೆ ಹೆಚ್ಚು ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ.ಜೀವಹಾನಿ,ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ.ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ.
ಅಭಿವೃದ್ಧಿ ಮತ್ತು ಪರಿಸರದ ನಡುವೆ ಸಮತೋಲನ ಸಾಧಿಸುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.