ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.