ಬೆಂಗಳೂರು: ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ, ಸಿಡಬ್ಲ್ಯೂಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರೇಜರ್ ಟೌನ್, ಕೋರಮಂಗಲ, ಕೆ.ಜಿ ಹಳ್ಳಿ ಸೇರಿ ಹಲವು ಕಡೆ ದಾಳಿ ನಡೆಸಿದ್ದು, ನಗರದ ಕೆಲ ಪ್ರಮುಖ ಸಿಗ್ನಲ್‌ಗಳಲ್ಲಿ ಮಕ್ಕಳನ್ನು ಬಳಿಸಿ ಭಿಕ್ಷಾಟನೆ ಮಾಡುವುದಕ್ಕೆ ಮಕ್ಕಳನ್ನ ಬಳಕೆ ಮಾಡುತ್ತಿದ್ದರು.
ಈ ಬಗ್ಗೆ ಸಿಸಿಬಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ಸಿಡಬ್ಲ್ಯೂಸಿ ಅಧಿಕಾರಿಗಳ ಗಮನಕ್ಕೆ ತಂದು ಸಿಸಿಬಿ ಮತ್ತ ಸಿಡಬ್ಲ್ಯೂಸಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಬಡವರ ಮಕ್ಕಳು ಹಾಗೂ ಹೊರ ರಾಜ್ಯದ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಣೆ ಮಾಡಿರೋ ಸಿಸಿಬಿ ಪೊಲೀಸರು, ರಕ್ಷಣೆ ಮಾಡಿರೋ ಮಕ್ಕಳನ್ನು ಸಿಡಬ್ಲ್ಯೂಸಿ ಸುಪರ್ದಿಗೆ ಒಪ್ಪಿಸಿದ್ದಾರೆ. ಇನ್ನು ಮಕ್ಕಳನ್ನ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿದ್ದವರನ್ನ ವಶಕ್ಕೆ ಪಡೆದಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.