ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಬೆಂಗಳೂರಿನಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದರು ಎಂಬ ಆರೋಪ ಕೇಲಕಿ ಬಂದಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ವಿರುದ್ಧ ತನಿಖೆ ನಡೆಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. ಏನಿದು ಪ್ರಕರಣ? ಕಳೆದ ವರ್ಷ ಬಿಬಿಎಂಪಿ ಮುಖ್ಯ ಆಯುಕ್ತರು ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಮಾಹಿತಿಯನ್ನು ಸಂಗ್ರಹಿಸಲು “ಚಿಲುಮೆ” ಎಂಬ ಖಾಸಗಿ ಸಂಸ್ಥೆಗೆ ವಹಿಸಿತ್ತು. ಖಾಸಗಿ ಸಂಸ್ಥೆಯೊಂದಕ್ಕೆ ಸಾರ್ವಜನಿಕರ ಖಾಸಗಿ ಮಾಹಿತಿ ಸಂಗ್ರಹಿಸಲು ಕಾಂಟ್ರ್ಯಾಕ್ಟ್ ನೀಡಿದ್ದಕ್ಕೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿತ್ತು. ಮಾತ್ರವಲ್ಲದೇ ಸಾರ್ವಜನಿಕವಾಗಿ ಚರ್ಚೆಗೂ ಗ್ರಾಸವಾಗಿತ್ತು. ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಲು ಚಿಲುಮೆ ಎಂಬ ಸಂಸ್ಥೆಗೆ ವಹಿಸಿದ್ದೇ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನೆಲೆ ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಈ ಬಗ್ಗೆ ಮತ್ತೆವಚಕಾರ ಎತ್ತುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವೊಂದನ್ನು ಬರೆದು ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದರು. ಮೇಲ್ಮನೆ ಮಾಜಿ ಸದಸ್ಯರ ಪತ್ರವನ್ನು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ಅವರು ಮಾಡಿರುವ ಗಂಭೀರ ಆರೋಪಗಳನ್ನು ಪರಿಗಣಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ನುಂದಿನ ಕ್ರಮಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ! ಮತದಾರರ ಮಾಹಿತಿ ಸಂಗ್ರಹಕ್ಕೆಂದು ವಿವಾದಿತ “ಚಿಲುಮೆ” ಸಂಸ್ಥೆಗೆ ಏಕೆ ಕೊಡಲಾಗಿತ್ತು? ಈ ನಿಟ್ಟಿನಲ್ಲಿ ತನಿಖೆ ನಡೆಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೂಚಿಸಿದ್ದರು. ಸಿಎಂ ಸೂಚನೆಯ ಬೆನ್ನಲ್ಲೇ ಸಿಎಸ್ ಅವರು ಚಿಲುಮೆ ಮೇಲೆ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರ ಮೇಲೆ ಬಂದಿರುವ ಗಂಭೀರವಾದ ಆರೋಪಗಳನ್ನು ಪರಾಮರ್ಶೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಮೊರೆ ಹೋಗಿದ್ದರು