ಬೆಂಗಳೂರು: ಪ್ರತಿ ಭಾನುವಾರ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಗೆ ಸಂಚಾರ ಪ್ರಾರಂಭ ಮಾಡುತ್ತಿತ್ತು. ಆದರೆ ನಾಳೆ, ಮಾರ್ಚ್ 10ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಲಿದೆ ಎಂದು BMRCL ತಿಳಿಸಿದೆ.
ಬೆಂಗಳೂರಿನಲ್ಲಿ ಮಾರ್ಚ್ 10, 2024ರಂದು ಕರ್ನಾಟಕ ಪೊಲೀಸ್ ವತಿಯಿಂದ ರಾಜ್ಯ ಮಟ್ಟದ 5 ಸಾವಿರ ಮತ್ತು 10 ಸಾವಿರ ಮೀಟರ್ ಮ್ಯಾರಥಾನ್ ಆಯೋಜಿಸಲಾಗಿದೆ.
ಈ ಹಿನ್ನೆಲೆ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು BMRCL ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಬೆಳಿಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭಿಸಲಿದೆ ಎಂದು BMRCL ತಿಳಿಸಿದೆ.