ಬೆಂಗಳೂರು : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ಕೊಡುತ್ತಿರೋದನ್ನ ವಿರೋಧಿಸಿ ನವೆಂಬರ್ 4 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ರಾಜ್ಯದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ಕೊಡುತ್ತಿರೋದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.
ರೈತರ ಜಮೀನಿಗೆ ನೋಟಿಸ್ ಕೊಡುತ್ತಿಲ್ಲ ಎಂದು ಸರ್ಕಾರ ಹೇಳಿದ್ರು, ಪ್ರತಿದಿನ ಒಂದಲ್ಲ ಒಂದು ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ಕೊಟ್ಟ ವರದಿಗಳು ಬರ್ತಾನೆ ಇದೆ . ಈ ಹಿನ್ನೆಲೆಯಲ್ಲಿ ಇದನ್ನ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಈ ವಿಚಾರವನ್ನ ಇಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರಿಸಿದೆ. ರೈತರ ಪರವಾಗಿ ಹೋರಾಟ ನಡೆಸುವಂತೆ ರಾಜ್ಯದ ಎಲ್ಲಾ ಬಿಜೆಪಿ ಶಾಸಕರು, ಮಾಜಿ ಶಾಸಕರು ಹಾಗೂ ಸಂಸದರಿಗೆ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೂಚಿಸಿದ್ದಾರೆ. ವಕ್ಫ್ ಆಸ್ತಿ ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿದ ಪಹಣಿಯನ್ನ ತಕ್ಷಣವೇ ವಾಪಸ್ ಪಡೆಯಬೇಕು, ಅಲ್ದೇ ಸಚಿವ ಜಮೀರ್ ಅವರನ್ನ ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.