ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಪ್ಪ, ನೇಮಕಾತಿ ವಿಭಾಗದ ಡಿಐಜಿಪಿ ಸುಧೀರ್ ಕುಮಾರ್ ರೆಡ್ಡಿ , ಪೂರ್ವ ಸಂಚಾರ ವಿಭಾಗದ ಡಿಸಿಪಿ ಡಾ.ಕೋನಾ ವಂಶಿಕೃಷ್ಣ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.