ಬೆಂಗಳೂರು: ಬೆಂಗಳೂರು ವ್ಯಾಪ್ತಿಯ ಬಿ ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದೆ. ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
2024ರ ಸೆಪ್ಟೆಂಬರ್ 30ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ ಖಾತಾ ಗಳಿಗೆ ಎ ಖಾತಾ ಅಥವಾ ಸರಿಯಾದ ಕಾನೂನು ಬದ್ಧ ಖಾತಾ ಎಂದು ನೀಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನೇಕ ವರ್ಷಗಳಿಂದ ಕಾನೂನು ಮಾನ್ಯತೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದ ಬಿ ಖಾತಾದಾರರಿಗೆ ಅನುಕೂಲವಾಗಲಿದೆ. ಶೀಘ್ರದಲ್ಲಿ ನಿಯಮಾವಳಿ ಸಹಿತ ಅಧಿಕೃತ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪ್ರಸ್ತುತ ಇ- ಖಾತಾ ಜಾರಿಯಲ್ಲಿ ಇರುವುದರಿಂದ ಎ ಖಾತಾ ಹಾಗೂ ಸರಿಯಾದ ಖಾತಾ ಗಳನ್ನು ಹೇಗೆ ವಿತರಿಸಬೇಕು ಎನ್ನುವ ಪ್ರಕ್ರಿಯೆ ಮತ್ತು ಶುಲ್ಕ ವಿವರಗಳನ್ನು ತಿಳಿಸುವ ಸಾಧ್ಯತೆ ಇದೆ. ವಿದ್ಯುತ್, ನೀರು, ಒಳಚರಂಡಿ ಸಂಪರ್ಕ ಸಮಸ್ಯೆಗೆ ಈಗ ಮುಕ್ತಿ ಸಿಗಲಿದೆ ಎನ್ನಲಾಗಿದೆ.