ಬೆಂಗಳೂರು : ಹಲವು ವರ್ಷಗಳ ಹಿಂದೆ ಸುದ್ದಿ ಆಗಿದ್ದ ಮೀಟೂ ವಿಷಯ ಈಗ ಮತ್ತೆ ಸದ್ದು ಮಾಡುತ್ತಿದೆ.. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಆರೋಪಿಸುತ್ತಿದ್ದಾರೆ.. ಹೇಮಾ ಕಮಿಟಿ ರಿಪೋರ್ಟ್ ಪ್ರಕಟ ಆದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ.
ಫೈರ್ (ಫಿಲ್ಮ್ ಇಂಡಸ್ಟ್ರೀ ಫಾರ್ ರೈಟ್ಸ್ ಆ್ಯಂಡ್ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿಯಾದ FIRE ಸಂಘಟನೆ ಕೇರಳ ಮಾದರಿ ತನಿಖೆಗೆ ಆಗ್ರಹಿಸಿದೆ. ಮೀಟೂ ವಿವಾದದ ಬಳಿಕ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಈ ಹಿಂದೆ ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ FIRE ರಚನೆ ಮಾಡಲಾಗಿತ್ತು. ಇದರಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ನಿರ್ದೇಶಕರಾದ ಕವಿತಾ ಲಂಕೇಶ್, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಸಾಕಷ್ಟು ನಟಿಯರು ಸದಸ್ಯರಾಗಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ನಟ ಚೇತನ್ ‘ ಫೈರ್ – ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ – 2017 ರಿಂದ ಲಿಂಗ-ಸಮಾನತೆಯ ಕನ್ನಡ ಚಲನಚಿತ್ರೋದ್ಯಮವನ್ನು ನಿರ್ಮಿಸಲು ಕೆಲಸ ಮಾಡಿದೆ. ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು ಸಮಿತಿಯನ್ನು ರಚಿಸಬೇಕೆಂದು ಒತ್ತಾಯಿಸುವ ನಮ್ಮ ಫೈರ್ ಅರ್ಜಿಗೆ ಇಂದು ಲಿಂಗ ನ್ಯಾಯದ 153 ಪ್ರತಿಪಾದಕರು ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

































