ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಕಗ್ಗಂಟು ಮೈತ್ರಿ ಪಕ್ಷದಲ್ಲಿ ಮುಂದುವರೆದಿದೆ. ಯಾರು ಅಭ್ಯರ್ಥಿ ಅನ್ನೋ ಕುತೂಹಲ ಹೆಚ್ಚಾಗಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಮ್ಮ ಕುಟುಂಬದಿಂದ ಅಭ್ಯರ್ಥಿ ಹಾಕುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದಿದ್ದಾರೆ. ಯೋಗೇಶ್ವರ್ ತಾವೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಎಲ್ಲವನ್ನೂ ಮೈತ್ರಿ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಜೆಡಿಎಸ್ ಬಿಜೆಪಿ ನಾಯಕರು ಸೇರಿ ನಿರ್ಧಾರ ಮಾಡುತ್ತೇವೆ. ಬಿಜೆಪಿ – ಜೆಡಿಎಸ್ ಎಲ್ಲ ನನ್ನ ಕುಟುಂಬವೇ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕಷ್ಟೇ, ಇದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದರು.
