ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು: ಮಳೆ ಬಾರದೆ ಕಷ್ಟಪಟ್ಟು ಬೆಳೆಸಿದ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತನೊಬ್ಬ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.
ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪರಮೇಶ್ವರಪ್ಪ (52) ಮೃತ ರೈತನಾಗಿದ್ದಾನೆ, 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿತ್ತು,
ಬ್ಯಾಂಕ್ ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ಸಾಲ ಮಾಡಿದ್ದ ರೈತ ಪರಮೇಶ್ವರಪ್ಪ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ,
ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಫಿನಾಡಿನಲ್ಲುಂಟಾದ ಬರಗಾಲದಿಂದಾಗಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.