ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಅವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಎರಡು ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ, ಕೃಷಿ ಇಲಾಖೆ ಕಚೇರಿಯಲ್ಲಿ, ಹಾಗೂ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲಿಯೂ ಶೋಧ ನಡೆಸಲಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.