ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ಶೋಧಕಾರ್ಯ ನಡೆಸಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಮತ್ತು ತುಮಕೂರಿನಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧಕಾರ್ಯ ಮುಂದುವರೆದಿದೆ.
ಈ ಶೋಧಕಾರ್ಯದಲ್ಲಿ ಸುಮಾರು 100 ಕ್ಕೂ ಲೋಕಾಯುಕ್ತ ಪೊಲೀಸರು ಹಾಗೂ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಬೇಕಿದೆ.