ಬೆಂಗಳೂರು: ಬೆಸ್ಕಾಂ ಜಾಗೃತದಳದ ಎಇಇ ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಸವೇಶ್ವರನಗರದಲ್ಲಿ 15 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅವರು ಬಲೆಗೆ ಬಿದ್ದಿದ್ದಾರೆ.
ಅಪಾರ್ಟ್ ಮೆಂಟ್ ನ ವಿದ್ಯುತ್ ಬಿಲ್ ವಿಚಾರಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 65 ಲಕ್ಷ ರೂ.ಗೆ ಡಿಮ್ಯಾಂಡ್ ಮಾಡಿದ್ದರು. 15 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಲಂಚದ ಹಣದ ಸಮೇತ ಬಸವರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.






























