ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ 7 ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ೭ ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಮಹೇಶ್ ಬಿಲಿಯಾ, ಪ್ರೇಮ್ ಚಂದ್ ಗರಗ್, ಚೇತನ್ ಷಾ, ಖಾರದಪುಡಿ ಮಹೇಶ್, ಸ್ವಸ್ತಿಕ್ ನಾಗರಾಜ್, ಗೋವಿಂದ ರಾಜು ಮತ್ತು ಶಾಸಕ ಸೈಲ್ ಅವರನ್ನು ಪೊಲೀಸರು ಜೈಲಿಗೆ ಕರೆದೊಯ್ದಿದ್ದಾರೆ.