ಬೆಂಗಳೂರು: ಕರ್ನಾಟಕದಲ್ಲಿ 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯ ಕಾರಣ ಬರ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಈಗಾಗಳೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದೆ. ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ.
ಈ ಕುರಿತು ಸಿಂಧು ಬಿ. ರೂಪೇಶ್, ನಿರ್ದೇಶಕರು. ಪಿ.ಎಂ.ಪೋಷಣ್, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಜ್ಞಾಪನಾ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕ ಸರ್ಕಾರದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ (Ground Truthing) ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದ್ದು, ಇದು ತಕ್ಷಣದಿಂದ ಜಾರಿಗೆ ಬಂದಿದೆ ಎಂದು ಹೇಳಿದೆ.