ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅವರು ಶುಕ್ರವಾರ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
