ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಚಕ್ರಕ್ಕೆ ದುಪಟ್ಟಾ ಸಿಲುಕಿ 27 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಮುಂಬೈನ ಕಂಡಿವಲಿಯ ಪ್ರತಿಮಾ ಯಾದವ್ ಬಳಿಯ ವಸಾಯಿ ಪ್ರದೇಶದ ದೇವಸ್ಥಾನಕ್ಕೆ ಭೇಟಿ ನೀಡಿ ಪತಿಯೊಂದಿಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ನೈಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರ ದುಪಟ್ಟವು ಹೆದ್ದಾರಿಯ ಬಾಪಾನೆ ಗ್ರಾಮದ ಬಳಿ ಬೈಕ್ ಚಕ್ರಕ್ಕೆ ಸಿಕ್ಕಿಹಾಕಿಕೊಂಡಿತ್ತು. ಬಳಿಕ ಉಸಿರುಗಟ್ಟಿದಂತಾಗಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಹಿಳೆಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ರು ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.