ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಭಾರೀ ಮಳೆಗೆ ಮನೆಗಳು, ಸೇತುವೆಗಳು ಮತ್ತು ರಸ್ತೆಗಳು ಕುಸಿದಿದ್ದು, ಅವುಗಳ ಅವಶೇಷದಡಿ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಸಲಾಗುತ್ತಿದೆ. ಇನ್ನು ಈ ಘಟನೆಯ ಬಳಿಕ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗವರ್ನರ್ ಲೀಟ್ ಅವರು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲು 626 ಸೈನಿಕರೊಂದಿಗೆ 12 ವಿಮಾನಗಳು, 45 ವಾಹನಗಳು ಮತ್ತು 12 ದೋಣಿಗಳನ್ನು ನಿಯೋಜನೆ ಮಾಡಲಾಗಿದೆ.