ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ಕೊಟ್ಟಿದೆ.
2022ರ ಸೆ.1ರಂದು ಅಪ್ರಾಪ್ತ ಬಾಲಕಿ ಮೇಲೆ ದಾಖಲಾಗಿದ್ದ ಪೋಕ್ರೋ ಪ್ರಕರಣದಲ್ಲಿ ಶ್ರೀಗಳನ್ನು ಅರೆಸ್ಟ್ ಮಾಡಲಾಗಿತ್ತು. 7 ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ. 1 ಕೇಸಿಗೆ ಮಾತ್ರ ಜಾಮೀನು ನೀಡಿದ್ದು, ಮತ್ತೊಂದು ಪ್ರಕರಣ ವಿಚಾರಣೆ ನಡೆಯುತ್ತಿದ್ದರಿಂದ ಜೈಲಿನಿಂದ ಬಿಡುಗಡೆ ಇಲ್ಲವಾಗಿದೆ.