ಬೆಂಗಳೂರು: ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಬೇಲ್ ಪಡೆದು ಹೊರ ಬಂದಿದ್ದ ಶಾಸಕ ಮುನಿರತ್ನ ರೇಪ್ ಕೇಸ್ನಲ್ಲಿ ಅರೆಸ್ಟ್ ಆಗಿದ್ದರು. ಜೈಲಿನಿಂದ ಮುನಿರತ್ನರನ್ನು ವಶಕ್ಕೆ ಪಡೆದ ಕಗ್ಗಲಿಪುರ ಪೊಲೀಸರು, ರೇಪ್ ಕೇಸ್ ಸಂಬಂಧ ವಿಚಾರಣೆಗೆ ನಡೆಸಿದ್ದಾರೆ. ಅತ್ಯಾಚಾರ, ಹನಿಟ್ರ್ಯಾಪ್ ಕೇಸ್ನಲ್ಲಿ ಮತ್ತೆ ಬಂಧನವಾಗಿರುವ ಶಾಸಕ ಮುನಿರತ್ನಗೆ ಪೊಲೀಸರು ಫುಲ್ ಡ್ರಿಲ್ ಮಾಡ್ತಿದ್ದಾರೆ. ಕಗ್ಗಲೀಪುರ ಠಾಣೆ ಪೊಲೀಸರು ರೇಪ್ ತನಿಖೆಯನ್ನ ಚುರುಕುಗೊಳಿಸಿದ್ದು, ಮುನಿರತ್ನಗೆ ಮೇಲಿಂದ ಮೇಲೆ ವಿಚಾರಣೆ ಮಾಡಿದ ಪೊಲೀಸರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎದುರು ಹಾಜರುಪಡಿಸಿದ್ದರು. ಸದ್ಯ ನ್ಯಾಯಾಲಯ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ