ಚೆನ್ನೈ: ತಮಿಳಿನ ಖ್ಯಾತ ನ್ಯೂಸ್ ಆ್ಯಂಕರ್ ಬ್ಲಡ್ ಕ್ಯಾನ್ಸರ್ ನಿಂದಾಗಿ ಸಾವನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ.
ತಮಿಳಿನ ಖಾಸಗಿ ದೂರದರ್ಶನದಲ್ಲಿ ವಾರ್ತಾ ವಾಚಕಿಯಾಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಜನಪ್ರಿಯ ಟಿವಿ ಚಾನೆಲ್‌ಗಳಾದ ಸತ್ಯಂ, ಪಾಲಿಮರ್ ಮತ್ತು ನ್ಯೂಸ್ ತಮಿಳಿನಲ್ಲಿ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಸೌಂದರ್ಯ ಅವರ ಆರೋಗ್ಯ ಹದಗೆಟ್ಟಿತ್ತು. ಬಳಿಕ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಯಾವುದೇ ಪ್ರಗತಿ ಕಂಡಿಲ್ಲ
ವೈದ್ಯರ ಸಲಹೆಯಂತೆ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ರಕ್ತ ಕ್ಯಾನ್ಸರ್ ನಾಲ್ಕನೆ ಹಂತದಲ್ಲಿರುವ ಬಗ್ಗೆ ತಿಳಿದು ಬಂದಿತ್ತು, ಬಳಿಕ ಚಿಕಿತ್ಸೆಗೆ ಒಳಗಾಗಿದ್ದರು. ಈ ನಡುವೆ ಚಿಕಿತ್ಸೆ ಗೆ ಆರ್ಥಿಕ ಸಮಸ್ಯೆಯಾದಾಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆರ್ಥಿಕ ನೆರವಿಗೆ ಮನವಿ ಮಾಡಿದ್ದರು. ಈ ಕಿರುತೆರೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರು ಆರ್ಥಿಕ ಸಹಾಯ ಮಾಡಿದರು. ತಮಿಳುನಾಡು ಸರ್ಕಾರಕ್ಕೂ ಮನವಿ ಸಲ್ಲಿಸಲಾಗಿತ್ತು. ಇದಾದ ನಂತರ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಂದರ್ಯ ಅವರ ಚಿಕಿತ್ಸೆಗೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದರು. ಈ ಸಹಾಯದ ಮೂಲಕ ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಸೌಂದರ್ಯ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.