ಬೆಂಗಳೂರು: ಬ್ಲ್ಯಾಕ್ ಮೇಲ್ ತಂತ್ರದಿಂದ ರಾಜ್ಯಾಧ್ಯಕ್ಷರ ನೇಮಕವಾಗಿದೆ ಎಂದು ಬಿಜೆಪಿಯ ಅತೃಪ್ತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ತಯಾರಾಗಿದ್ದೇನೆ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು.
ಅಧ್ಯಕ್ಷನಾಗಬೇಕು, ವಿರೋಧ ಪಕ್ಷದ ನಾಯಕನಾಗಬೇಕು ಎಂದು ನಾನು ಹಲ್ಕಾ ಕೆಲಸ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಇವರ ತರ ಹೊಂದಾಣಿಕೆಯಾಗಿದ್ದರೆ ಬೇಕಾದಷ್ಟು ದುಡ್ಡು ಮಾಡಬಹುದಿತ್ತು. ಇಂತಹ ಸ್ಲಮ್ ನಲ್ಲಿ ನಾನು ವಾಸ ಮಾಡುತ್ತಿರುತ್ತಿರಲಿಲ್ಲ.ಇದನ್ನೆಲ್ಲಾ ನಾನು
ವೀಕ್ಷಕರಿಗೆ ಹೇಳಿದ್ದೇನೆ. ಇವರ ಬಣ್ಣವನ್ನು ಬಯಲು ಮಾಡುವ ಕೆಲಸ ಮಾಡಿದ್ದೇನೆ ಎಂದು ಕಿಡಿಕಾರಿದರು.
ಯಡಿಯೂರಪ್ಪ, ವಿಜಯೇಂದ್ರರಿಂದ ಯತ್ನಾಳ್ ಸಂಪರ್ಕ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲಸ ಇದ್ದಾಗ ಮಾಡುತ್ತಾರೆ, ಮುಂದೆ
ತುಳಿಯುವ ಕೆಲಸಕ್ಕಾಗಿ ಕರೆ ಮಾಡುತ್ತಾರೆ ಎಂದರು.
ನನ್ನಂತಹ ಬಡಪಾಯಿ ಮನೆಗೆ ವೀಕ್ಷಕರು ಬಂದಿದ್ದರು. ಅದೇ ಯಡಿಯೂರಪ್ಪಮನೆಗೆ ಹೋಗಿದ್ದರೆ ಬೆಳ್ಳಿ ತಟ್ಟೆ ಊಟ ಸಿಕ್ತಿತ್ತು ಎಂದು ಯತ್ನಾಳ್ ಹೇಳಿದರು.
ಕರ್ನಾಟಕದಲ್ಲಿ ಆಗಿರುವ ಬೆಳವಣಿಗೆ, ಚುನಾವಣೆಯಲ್ಲಿ ಯಾರು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ, ಒಂದು ವರ್ಗದ ಕೇಂದ್ರೀ ಕೃತವಾಗಿ ಮಾಡಿದ್ದರು ಎಂದು ವಿವರಿಸಿದ್ದೇನೆ. ಅವರಿಗೆ ಎಷ್ಟೋ ವಿಷಯ ಗೊತ್ತಿರಲಿಲ್ಲ. ನಾನು ಧೈರ್ಯದಿಂದ ಎಲ್ಲವನ್ನೂ ಹೇಳಿದ್ದೇನೆ ಎಂದರು.
ಕೆಲವರು ಬ್ಲ್ಯಾ ಕ್ ಮೇಲ್ ಮಾಡಲು ಪ್ರಯತ್ನ ಮಾಡುತ್ತಾರೆ, ನಾನು ಅಂಜಲ್ಲ ಎಂದು ಹೇಳಿದ್ದೇನೆ. ಇಬ್ಬರೂ ಬಹಳ ಖುಷಿಯಾದರು. ನೀವು ಎಲ್ಲವನ್ನೂ ಧೈರ್ಯವಾಗಿ ಹೇಳಿದ್ದೀರಿ, ಅಧ್ಯಕ್ಷರು ಮತ್ತು ಪ್ರಧಾನಿಗೆ ಹೇಳುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ವಿಪಕ್ಷ ನಾಯಕ ಉತ್ತರ ಕರ್ನಾಟಕ್ಕೆ ಕೊಡಬೇಕು ಆಗ್ರಹಿಸಿದರು. ದಕ್ಷಿಣ ಕರ್ನಾಟಕದವರೇ ಆಗಬೇಕಾ? ಮಂಗಳೂರು ಬಿಟ್ಟರೆ ದಕ್ಷಿಣ ಕರ್ನಾ ಟಕದ ಎಷ್ಟು ಶಾಸಕರರಿದ್ದಾರೆ. ಬಹಳಷ್ಟು ಶಾಸಕರು ನಮ್ಮ ಜೊತೆಗಿದ್ದಾರೆ ಆದರೆ ಅವರಿಗೆ ಮಾತಾಡಲು ಧಮ್ ಇಲ್ಲ. ಅವರಲ್ಲಿ ಬಹಳಷ್ಟು ಜನ ತಮ್ಮ ಮಕ್ಕಳನ್ನು ಲೋಕಸಭೆಗೆ ನಿಲ್ಲಿಸಬೇಕೆಂದು ಇದ್ದಾರೆ. ಉತ್ತರ ಕರ್ನಾಟಕಕ್ಕೆ ಅವಕಾಶ ಕೊಡದಿದ್ದರೆ ಜನ ತೀರ್ಮಾನ ಮಾಡುತ್ತಾರೆ ಎಂದು ಯತ್ನಾಳ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.