ದಾವಣಗೆರೆ; 2023-24 ನೇ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ತಿಳಿಸಿದ್ದಾರೆ.
ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳು ನೀರನ್ನು ಹರಿಸಲಾಗುವುದು.
ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನಗಳು ನೀರನ್ನು ಹರಿಸಲಾಗುತ್ತದೆ. ನಂತರ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ಹಾಗೂ ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳು ನೀರನ್ನು ಹರಿಸಲಾಗುದು ಎಂದು ಅವರು ತಿಳಿಸಿದ್ದಾರೆ.