ಬೆಂಗಳೂರು: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಪುಣ್ಯತಿಥಿ ದಿನವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಏರ್ಪಡಿಸಲಾಗಿದ್ದ ರಾಜೀವ್ ಗಾಂಧಿ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.