ಭಾರತವು ಪಾಕಿಸ್ತಾನದ ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿ ಪ್ರಕಟವಾದ ಕೆಲವೇ ಗಂಟೆಗಳ ಬಳಿಕ ರಕ್ಷಣಾ ಸಚಿವಾಲಯ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ.
ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ ಆದರೆ ಜಮ್ಮು ಮತ್ತು ಕಾಶ್ಮೀರದ ಬಾಲಾಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ತಿಳಿಸಿದೆ.
ಮುಂಜಾನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.
ಇನ್ನು ಸೋಮವಾರ ಬೆಳಗ್ಗೆ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಗುರುತಿಸಿ ಅವರನ್ನು ಕೊಲ್ಲಲಾಗಿದೆ. ಆದರೆ ರ್ಜಿಕಲ್ ಸ್ಟ್ರೈಕ್ ನಡೆಸಿಲ್ಲ ಎಂದು ಸಚಿವಾಲಯ ತಿಳಿಸಿದೆ.