ಅಂಚೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿಯಿರುವರಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ನಲ್ಲಿ, 344 ಕಾರ್ಯನಿರ್ವಾಹಕ ಹುದ್ದೆಗಳು ಖಾಲಿಯಿವೆ.
ಹುದ್ದೆಗಳ ವಿವರ :
ಹುದ್ದೆಗಳು : ಎಕ್ಸಿಕ್ಯೂಟಿವ್.
ಒಟ್ಟು ಹುದ್ದೆಗಳು : 344.
ವೇತನ : ತಿಂಗಳಿಗೆ 30,000 ರೂ.
ಅರ್ಜಿ ಶುಲ್ಕ : 750 ರೂ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ / ಮಂಡಳಿಯಿಂದ ಯಾವುದೇ ವಿಷಯದಲ್ಲಿ (ನಿಯಮಿತ / ದೂರಶಿಕ್ಷಣ) ಪದವಿ ಪಡೆದಿರಬೇಕು (ಅಥವಾ) ಸರ್ಕಾರಿ ನಿಯಂತ್ರಣ ಸಂಸ್ಥೆಯಿಂದ ಅನುಮೋದಿಸಲ್ಪಟ್ಟಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 31
ಹೆಚ್ಚಿನ ಮಾಹಿತಿಗಾಗಿ :
https://www.ippbonline.com/