ಬೆಂಗಳೂರು: ಇಂಡಿಯಾ ಬದಲಿಗೆ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ. ಇಂಡಿಯಾ ಎಂಬ ಪದವನ್ನು ನಮ್ಮ ದೇಶ ಒಪ್ಪಿಕೊಂಡಿದ್ದು, ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದರು.
ಇನ್ನು ಕೇಂದ್ರ ಸರ್ಕಾರವು ದೇಶದ ಹೆಸರನ್ನುಇಂಡಿಯಾ ಬದಲಿಗೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.