ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ.
ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಇವರೇ ಮೃತ ದುರ್ದೈವಿಗಳು. ಗಾಯಾಳುಗಳು ಪ್ರಶಾಂತ್ (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಉಲಗಪ್ಪ (32), ರಾಕೇಶ್ (24) ತಿರುಪತಿ (33), ಶ್ರೀನಿವಾಸ್ (32) ಎಂದು ತಿಳಿದುಬಂದಿದೆ.
.

































