ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರದಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಂಗಳಮುಖಿಯ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ರಾಹುಲ್ ಮೌರ್ಯ (17) ಮೃತ ದುರ್ದೈವಿ ಎನ್ನಲಾಗಿದೆ. ಹುಣಸೂರಿನ ಕಿರಾಜಾಜಿ ಸರ್ಕಲ್ ಬಳಿ ಎಳನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯಗೆ ಎಳನೀರು ವ್ಯಾಪಾರ ಮಾಡಿ ಜೀವನ ಕಟ್ಟಿಕೊಂಡಿದ್ದನು.
ಆದರೆ, ಈ ಸ್ಥಳಕ್ಕೆ ಬಂದು ಸ್ನೇಹ ಬೆಳೆಸಿಕೊಂಡಿದ್ದ ಮಂಗಳಮುಖಿ ತನ್ನ ಮಗನನ್ನು ಆಗಾಗ ಜೊತೆಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆಂದು ರಾಹುಲ್ ಮೌರ್ಯನ ತಂದೆ ಆರೋಪಿಸಿದ್ದಾರೆ. ಮೂರ್ನಾಲ್ಕು ತಿಂಗಳ ಹಿಂದೆ ಅಂಗಡಿಗೆ ಹೋಗಿದ್ದ ರಾಹುಲ್ ದಿಢೀರ್ ನಾಪತ್ತೆಯಾಗಿದ್ದ, ಈ ನಡುವೆ ತಾಯಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ. ಆದರೆ ತಾನು ಇರುವ ಜಾಗ ತಿಳಿಸಿರಲಿಲ್ಲ.ನಂತರ ಜೂ.21ರಂದು ದೊಡ್ಡಮ್ಮನ ಮನೆಗೆ ವಾಪಸ್ ಆಗಿದ್ದನು. ಆದರೆ, ಜೂನ್ 23ರಂದು ಕೆಲವು ಮಂಗಳಮುಖಿಯರಿಂದ ರಾಹುಲ್ ಮೌರ್ಯ ಕುಟುಂಬಸ್ಥರ ಜೊತೆ ಜಗಳವೂ ಉಂಟಾಗಿತ್ತು. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ಜೊತೆಗೆ, ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು. ಇದರಿಂದ ಊರಿನಲ್ಲಿ ಮರ್ಯಾದೆ ಹಾಳಾಯಿತು ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.