ಮಂಗಳೂರು: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಲ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.
ನಿನ್ನೆ (ಭಾನುವಾರ) ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿದ್ದ ಮುಲ್ತಾಜ್ ಅವರ ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿತ್ತು.
ಅಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ನದಿಯಲ್ಲಿ ರಕ್ಷಣಾ ತಂಡಗಳು ನಿನ್ನೆಯಿಂದ ಶೋಧಕಾರ್ಯ ನಡೆಸುತ್ತಿದ್ದವು. ಇದೀಗ ನದಿಯಲ್ಲಿ ಮುಲ್ತಾಜ್ ಅಲಿ ಶವಪತ್ತೆಯಾಗಿದೆ.