ಹಿಮಾಚಲ ಪ್ರದೇಶ: ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕಂಗನಾ ರಣಾವತ್ ಮೊದಲ ಸ್ಪರ್ಧೆಯಲ್ಲಿ ಜಯದ ನಗುಮುಖ ಬೀರಿದ್ದಾರೆ.
70000 ಮತಗಳಿಂದ ನಟಿ ಗೆದ್ದಿದ್ದಾರೆ. ಈ ಮೂಲಕ ನಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕಂಗನಾ ಅವರು ಪಣ ತೊಟ್ಟಂತೆ ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ.
ಈ ಹಿಂದೆ ಲೋಕಸಭಾ ಚುನಾವಣೆ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಹಾಗಾದ್ರೆ ನಟಿ ಬಾಲಿವುಡ್‌ಗೆ ಗುಡ್ ಬೈ ಹೇಳ್ತಾರಾ ಎಂದು ಇದೀಗ ಚರ್ಚೆ ಶುರುವಾಗಿದೆ.